HomeKarnatakaಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ...

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ನೋಡುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ ವಿಸ್ತರಿಸಿದೆ.

ನೇರಳೆ ಹಾಗೂ ಹಸಿರು ಮಾರ್ಗಗಳ 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11 :45 ರವರೆಗೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.ಪೇಪರ್ ಟಿಕೆಟ್ ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದೆ. ವಿಶ್ವಕಪ್ ಗೆದ್ದ ಬೇಸರದಲ್ಲಿರುವ ಅಭಿಮಾನಿಗಳಿಗೆ ಈ ಪಂದ್ಯ ಖುಷಿ ತರಿಸುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular