ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಡಿ. 5 ರಿಂದ ಸುವರ್ಣ ಸೌಧದ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಡಿ.4 ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು, ಇಲ್ಲವಾದಲ್ಲಿ ಬೆಳಗಾವಿ ಅಧಿವೇಶನ ನಡೆಯುವ ಸುವರ್ಣ ಸೌಧದ ಮುಂದೆ ಉಗ್ರ ಪ್ರತಿಭಟನೆ ನಡೆಸುದಾಗಿ ಎಚ್ಚರಿಕೆ ನೀಡಿದ್ದಾರೆ. ಸೇವೆ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ 9 ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ನಡೆಸಲಾಗುತ್ತಿದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಡಿ.4 ರೊಳಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಖಲಿದ್ದರೆ ಡಿ.5 ರಿಂದ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ ಧರ್ಮವೀರ್ ಎಚ್ಚರಿಕೆ ನೀಡಿದ್ದಾರೆ.
ಅತಿಥಿ ಉಪನ್ಯಾಸಕರು ಕಳೆದ 2 ವರ್ಷದಿಂದ ಕಾಯಂ ನೇಮಕಾತಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಇದುವರೆಗೂ ಆಡಳಿತ ನಡೆಸಿದ ಸರ್ಕಾರ ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ ಎಂದರು.ಖಾಯಂ ಉಪನ್ಯಾಸಕರು 16 ಗಂಟೆ ಕೆಲಸ ಮಾಡಿದರೆ ಅತಿಥಿ ಉಪನ್ಯಾಸಕರು 15 ಗಂಟೆ ಕೆಲಸ ಮಾಡುತ್ತಿದ್ದಾರೆ. ನಮ್ಮನ್ನು ಜೀತದಾಳುಗಳಂತೆ ಸರ್ಕಾರ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.