HomeKarnatakaRain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ...

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 7 ರವರೆಗೂ ಭರ್ಜರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಿಹಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಡಿ.7 ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ. ಮಂಡ್ಯ, ಕೋಲಾರ. ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ , ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಡಿಸೆಂಬರ್ 4ರಂದು ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular