HomeIndiaಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಮೃತ ಐವರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಆಟೋ ರಿಕ್ಷಾ ಎರಡು ಲಾರಿಗಳ ನಡುವೆ ಸಿಲುಕಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಇಂತಹ ಮಾರಣಾಂತಿಕ ಅಪಘಾತಗಳಿಗೆ ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ಅಂಡರ್‌ಪಾಸ್‌ ನಿರ್ಮಿಸುವಂತೆ ಸ್ಥಳೀಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರೂ ಈಡೇರಿಲ್ಲ. ಮೃತ ಐವರು ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 19 ರಲ್ಲಿ ಕಿಕ್ಕಿರಿದು ಜನ ಸೇರಿದ್ದರಿಂದ ವಾಹನಗಳು ನಿಂತ ಕಾರಣ ಭಾರಿ ಟ್ರಾಫಿಕ್ ಜಾಮ್‌ ಆಗಿದೆ. ಪೊಲೀಸರು ಸುಗಮ ಸಂಚಾರಕ್ಕೆ ಕ್ರಮಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular