
ಬೆಂಗಳೂರು: ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿರುವ ತಾಂಡಾ, ಗೊಲ್ಲರಹಟ್ಟಿ ಸೇರಿದಂತೆ ಜನ ವಸತಿ ಪ್ರದೇಶಗಳನ್ನು ಶೀಘ್ರವೇ ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ಬಡ ಜನರ ಕೆಲಸಕ್ಕೆ ವಿಳಂಬ ಅನುಸರಿಸಬಾರದು ಎಂದು ಹೇಳಿದ್ದಾರೆ.
ಆರು ತಿಂಗಳ ಹಿಂದೆಯೇ ಸೂಚನೆ ನೀಡಿದ್ದರೂ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕಂದಾಯ ಗ್ರಾಮ ಘೋಷಣೆ ಮಾಡುವ ಜೊತೆಗೆ ಎಲ್ಲಾ ಕುಟುಂಬಗಳಿಗೆ ಜನವರಿ 10ರೊಳಗೆ ಹಕ್ಕು ಪತ್ರ ವಿತರಿಸಬೇಕೆಂದು ತಾಕೀತು ಮಾಡಿದ್ದಾರೆ.

 
		 
		 
		 
		 Loading ...
 Loading ... 
		 
		 
		