HomeKarnatakaನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಸಾಲ ಪಡೆದು ವಂಚನೆ: ಮಾಜಿ ಸಂಸದ ಶಿವರಾಮೇಗೌಡ ಕುಟುಂಬದ...

ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಸಾಲ ಪಡೆದು ವಂಚನೆ: ಮಾಜಿ ಸಂಸದ ಶಿವರಾಮೇಗೌಡ ಕುಟುಂಬದ ವಿರುದ್ಧ ಸಿಬಿಐ ಎಫ್ಐಆರ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅವುಗಳ ಆಧಾರದ ಮೇಲೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ಎಂಜಿ ರಸ್ತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ. ಮೋದಿ ದೂರು ನೀಡಿದ್ದು, ಇದನ್ನು ಆಧರಿಸಿ ಬೆಂಗಳೂರಿನ ನಂಜಪ್ಪ ಶಿವಪ್ರಸಾದ್, ಅವರ ಪತ್ನಿ ಉಮಾ ಪ್ರಸಾದ್, ರಾಯಲ್ ಕಂಕಾರ್ಡ್ ಎಜುಕೇಶನ್ ಟ್ರಸ್ಟ್ ಮತ್ತು ಟ್ರಸ್ಟ್ ಆಡಳಿತ ಮಂಡಳಿ ಪ್ರಮುಖರಾದ ಎಲ್.ಆರ್. ಶಿವರಾಮೇಗೌಡ, ಅವರ ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್ ಗೌಡ, ಸೊಸೆ ಎಲ್.ಎಸ್, ಭವ್ಯಾ ಗೌಡ, ಬ್ಯಾಂಕ್ ನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಳಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ಸಾಲ ಪಡೆದಿದ್ದ ಆರೋಪಿಗಳು ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಸಾಲ ಮರುಪಾವತಿ ಮಾಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ನವೆಂಬರ್ 7ರಂದು ದೂರು ನೀಡಲಾಗಿದ್ದು, ನವೆಂಬರ್ 21ರಂದು ಎಲ್.ಆರ್. ಶಿವರಾಮೇಗೌಡ ಸೇರಿದಂತೆ ಎಲ್ಲಾ ಆರೋಪಿತರ ವಿರುದ್ಧ ಸಿಬಿಐನ ಭ್ರಷ್ಟಾಚಾರ ನಿಗ್ರಹದಳದ ಬೆಂಗಳೂರು ಘಟಕದಿಂದ ಕೇಸ್ ದಾಖಲಿಸಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular