HomeKarnatakaBMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

ಬಿಎಂಟಿಸಿ ಬಸ್ ಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಕಾರಿನ ತುಂಬೆಲ್ಲ ಬೆಂಕಿ ಆವರಿಸಿ ಹೊತ್ತಿ ಉರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಬಹುತೇಕ ಸುಟ್ಟು ಕರಕಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular