
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದರು.

