ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಸದನದಲ್ಲಿ ಹೆಚ್ಚಿನ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಾಪದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಆಗುತ್ತೆ. ಎಲ್ಲಾ ಜನರಿಗೆ ನ್ಯಾಯ ಕೊಡಲು ನಾವು ಕಾರ್ಯಕ್ರಮ ಮಾಡಿದ್ದೇವೆ. ಬಿಜೆಪಿಯವರು ನಮ್ಮ ಬಗ್ಗೆ ಏನು ಮಾತಾಡ್ತಾರೆ? ಎಂದು ಪ್ರಶ್ನಿಸಿದರು.
ವಿಪಕ್ಷಗಳ ಎಲ್ಲಾ ಚರ್ಚೆಗೆ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು. ಇಂದಿನಿಂದ ಹತ್ತು ದಿನಗಳ ಕಾಲ ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜಿಸಲಾಗಿದೆ.