ಬೆಳಗಾವಿ : ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ.
ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ರೈತರು ಸುರ್ವಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾವೇರಿ ವಿವಾದ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕೊಂಡಸಕೊಪ್ಪದಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.
ಇಂದಿನಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.ಒಟ್ಟು 37 ಡಿವೈಎಸ್ ಪಿ, 9 IPS , 12 ಹೆಚ್ಚುವರಿ SP, 92 PI, 219 ಪಿಎಸ್ಐ, 366 ಎಎಸ್ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.