HomeIndiaBREAKING : ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ : ಡಿಸಿಎಂ ಡಿಕೆ...

BREAKING : ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಹೈದರಾಬಾದ್ ನ ಗಚ್ಚಿಬೌಲಿ ಬಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸಿಎಲ್ ಪಿ ಸಭೆ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೂಡ ಮಾಹಿತಿ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ಬಗ್ಗೆ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಲಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್​ಎಸ್ (ಭಾರತ್​ ರಾಷ್ಟ್ರ ಸಮಿತಿ)ನ್ನು ಸೋಲಿಸಿ ಕಾಂಗ್ರೆಸ್​ ಆಡಳಿತ ಚುಕ್ಕಾಣಿ ಹಿಡಿದಿದೆ. ಕಳೆದ ಎರಡು ಅವಧಿಗೆ ಆಡಳಿತ ನಡೆಸಿದ ಕೆಸಿಆರ್​ ನೇತೃತ್ವದ ಬಿಆರ್​ಎಸ್ ಪಕ್ಷ ಈ ಬಾರಿ ಅಧಿಕಾರವನ್ನು ಕಳೆದುಕೊಂಡಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​ 64 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular