HomeKarnatakaದುಷ್ಕರ್ಮಿಗಳಿಂದ C.P ಯೋಗೇಶ್ವರ್ ಬಾವ ಹತ್ಯೆ ಶಂಕೆ : ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸ್ ಕೂಂಬಿಂಗ್

ದುಷ್ಕರ್ಮಿಗಳಿಂದ C.P ಯೋಗೇಶ್ವರ್ ಬಾವ ಹತ್ಯೆ ಶಂಕೆ : ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸ್ ಕೂಂಬಿಂಗ್

ಚಾಮರಾಜನಗರ : ನಾಪತ್ತೆಯಾಗಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ ಇರುವ ಹಿನ್ನೆಲೆ ದುಷ್ಕರ್ಮಿಗಳು ಯೋಗೇಶ್ವರ್ ಬಾವ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸುಫಾರಿ ಕೊಟ್ಟು ಮೂವರು ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದಟ್ಟಾರಣ್ಯದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಕೊಳ್ಳೇಗಾಲದ ಮಾರ್ಗದ ಡಾಬಾದಲ್ಲಿ ಪಾರ್ಟಿ ಮಾಡಿ ಹನೂರು ಬಳಿ ಮಹದೇವಯ್ಯ ಅವರನ್ನು ಕೊಂದು ಶವ ಎಸೆದಿರಬಹುದು ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular