ನವದೆಹಲಿ: ದೇಶಾದ್ಯಂತ ಸುಮಾರು 71 ಪ್ರತಿಶತ ಗ್ರಾಮೀಣ ಕುಟುಂಬಗಳು ಈಗ ಜಲ ಶಕ್ತಿ ಮಿಷನ್ ಅಡಿಯಲ್ಲಿ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.
ಲಿಖಿತ ಉತ್ತರದಲ್ಲಿ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ತೆಲಂಗಾಣ, ಎ & ಎನ್ ದ್ವೀಪಗಳು, ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಮತ್ತು ಪುದುಚೇರಿ ಸೇರಿ ಒಂಬತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಿವೆ. ಆಗಸ್ಟ್ 15, 2019 ರಂದು ಜಲ ಜೀವನ್ ಮಿಷನ್ ಘೋಷಣೆಯ ಸಮಯದಲ್ಲಿ, 3.23 ಕೋಟಿ(17 ಪ್ರತಿಶತ) ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕಗಳನ್ನು ಹೊಂದಿವೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ, ನವೆಂಬರ್ 29 ರ ಹೊತ್ತಿಗೆ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ವರದಿ ಮಾಡಿದಂತೆ, ಸುಮಾರು 10.46 ಕೋಟಿ ಹೆಚ್ಚುವರಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹೇಳಿದರು.
2024 ರ ವೇಳೆಗೆ ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ವೈಯಕ್ತಿಕ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ.