alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸಿಹಿಸುದ್ದಿ ನೀಡಿದ್ದು, 9 ಸಾವಿರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಬಸವನಗೌಡ ದದ್ದಲ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿ ಮಾತನಾಡಿದರು. ಪೂರ್ಣಕವಚ ನಿರ್ಮಿತ 250 ವೇಗದೂತ ಸಾರಿಗೆಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. ಪೂರ್ಣಕವಚ ನಿರ್ಮಿತ 93 ನಗರ ಸಾರಿಗೆ ಬಸ್‌ಗಳನ್ನು ಡಲ್ಟ್ ಆರ್ಥಿಕ ಸಹಾಯದಿಂದ ಖರೀದಿಸಲು ಮಂಜೂರಾತಿ ದೊರೆತಿದ್ದು, ಖರೀದಿ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಪೂರ್ಣಗೊಂಡ ಹೊಸಬಸ್ ಡಿಪೋ ಜೊತೆಗೆ ಇತರೆ ಘಟಕಗಳಿಗೆ ಅವಶ್ಯಕತೆಗನುಗುಣವಾಗಿ ಹೊಸ ಬಸ್‌ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ರಾಯಚೂರಿನಲ್ಲಿ ನೂತನ ಬಸ್‌ಘಟಕದ ಕಾಮಗಾರಿ ಪೂರ್ಣಗೊಂಡಿದ್ದು,ಶೀಘ್ರದಲ್ಲಿ ಉದ್ಘಾಟಿಸಿ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ ಅವರು ರಾಯಚೂರು ಜಿಲ್ಲೆಯಲ್ಲಿ ಒಟ್ಟು 07 ಬಸ್‌ಘಟಕಗಳಿದ್ದು,665ಬಸ್‌ಗಳಿದ್ದು,ಅವುಗಳಲ್ಲಿ 654 ಬಸ್‌ಗಳು ಚಾಲನೆಯಲ್ಲಿವೆ ಎಂದು ಅವರು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...