
ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳ ಅಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಫಲಾನುಭವಿಗಳು ಪುರಸಭೆ ಕುರುಗೋಡು ವ್ಯಾಪ್ತಿಯ ನಿವಾಸಿಯಾಗಿದ್ದು, ಬಡತನರೇಖೆ ಕೆಳಗಿನ ಕುಟುಂಬದವರಾಗಿರಬೇಕು. ಅರ್ಜಿ ಸಲ್ಲಿಸಲು ಡಿ.18 ಕೊನೆಯ ದಿನವಾಗಿರುತ್ತದೆ.
ಬೇಕಾದ ದಾಖಲೆಗಳು: ರೇಷನ್ ಕಾರ್ಡ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಎರಡು ಭಾವಚಿತ್ರಗಳು, ಸ್ವಯಂ ಉದ್ಯೋಗದ ಬಗ್ಗೆ ಭಾವಚಿತ್ರ, ಗುಂಪಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ಅಂಗವಿಕಲರಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

