8 ಬಾರಿ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಸಾವು : ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 8 ಬಾರಿ ಮೈಸೂರಿನ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಒಂಟಿ ಸಲಗ ದಾಳಿಗೆ ಮೃತಪಟ್ಟಿದ್ದು, ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅರ್ಜನನ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು.

ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ.
ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read