HomeKarnatakaBREAKING : ಡಯಾಲಿಸಿಸ್ ನೌಕರರ ಪ್ರತಿಭಟನೆ ಎಫೆಕ್ಟ್ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ರೋಗಿ ಸಾವು

BREAKING : ಡಯಾಲಿಸಿಸ್ ನೌಕರರ ಪ್ರತಿಭಟನೆ ಎಫೆಕ್ಟ್ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ರೋಗಿ ಸಾವು

ಉತ್ತರ ಕನ್ನಡ : ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಈ ಹಿನ್ನೆಲೆ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆಯಲ್ಲಿ ಭಾರಿ ಅಡಚಣೆ ಉಂಟಾಗಿದ್ದು, ರೋಗಿಗಳು ಪರದಾಡುತ್ತಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಯೋರ್ವ ಮೃತಪಟ್ಟಿದ್ದಾರೆ. ಮೃತರನ್ನು ಗುಂಜಾವತಿ ಗ್ರಾಮದ ಸೈಯದ್ ಮೊಹಮ್ಮದ್ ಗೌಸ್ (58) ಎಂದು ಗುರುತಿಸಲಾಗಿದೆ.

ಮೃತರು ಎರಡು ತಿಂಗಳಿಂದ ಮುಂಡಗೋಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೈಯದ್ ಡೆಯಾಲಿಸಿಸ್ ಮಾಡಿಸುತಿದ್ದರು, ಆದರೆ ಡಯಾಲಿಸಿಸ್ ನೌಕರರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಂದರ್ಭಿಕ ಚಿತ್ರ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular