alex Certify ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆ.ಎಸ್.ಆರ್.ಎಸ್.ಎ.ಸಿ. ಸಂಸ್ಥೆಗೆ ಸಮೀಕ್ಷೆ ನಡೆಸಲು ಕಾರ್ಯಾದೇಶ ನೀಡಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗುತ್ತಿಗೆ ಪಡೆದ ಪ್ರದೇಶಕ್ಕಿಂತ ಹೆಚ್ಚಿನ ಜಾಗ ಒತ್ತುವರಿ ಮಾಡಿಕೊಂಡು ಗುತ್ತಿಗೆದಾರರು ಅಕ್ರಮ ಗಣಿಗಾರಿಕೆ ನಡೆಸುವುದು, ರಾಜಧನ ಪಾವತಿಸದೆ ಉಪಖನಿಜ ಮಾರಾಟ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...