HomeKarnatakaBREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು ಹೊತ್ತಿ ಉರಿದು ಬಾಲಕಿ ಸೇರಿ...

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು ಹೊತ್ತಿ ಉರಿದು ಬಾಲಕಿ ಸೇರಿ ಇಬ್ಬರು ಸಜೀವ ದಹನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್‌ ಬಳಿ ಕಾರು ಹೊತ್ತಿ ಉರಿದ ಪರಿಣಾಮ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಂಬರಗಾ ಕ್ರಾಸ್‌ ಬಳಿ ಅಡ್ಡ ಬಂದ ಟಿಪ್ಪರ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಟಿಪ್ಪರ್‌ ಡೀಸೆಲ್‌ ಟ್ಯಾಂಕ್‌ ಒಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular