
ಲಾರಿ ಡಿಕ್ಕಿಯಾಗಿ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಇಸ್ಮಾಯಿಲ್, ಚನ್ನಬಸವ, ರವಿ, ಅಂಬರೀಷ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಗವಾಗಿ ಬಂದ ಟಾಟಾ ಏಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

