ಬೆಂಗಳೂರು : ತೆಲಂಗಾಣದ ನೂತನದ ಮುಖ್ಯಮಂತ್ರಿ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕೆ ನಾನು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿಯಾಗಿ ‘ರೇವಂತ್ ರೆಡ್ಡಿ’, ಹಾಗೂ ಉಪಮುಖ್ಯಮಂತ್ರಿಯಾಗಿ ಮಲ್ಲುಭಟ್ಟಿ ವಿಕ್ರಮಾರ್ಕ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್ ನ ಎಲ್ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮತ್ತಿತರರಿದ್ದರು.