
ಮೃತರನ್ನು ಚಿಕ್ಕಗೌಜದ ಮನೋಜ್ (25) ಮತ್ತು ಪಾಂಡವಪುರದ ನಯನ (27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಇಬ್ಬರು ತಮ್ಮ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಆಲ್ಟೋ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಭೀಕರ ಅಪಘಾತಕ್ಕೆ ಕೆಳಗೆ ಬಿದ್ದ ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ನಯನ ಸ್ಥಳದಲ್ಲೇ ಮೃತಪಟ್ಟರೆ, ಮನೋಜ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣವಾಗಿದೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

