HomeKarnatakaರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ ʻಸೈಕಲ್ ಭಾಗ್ಯʼ

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ ʻಸೈಕಲ್ ಭಾಗ್ಯʼ

ಬೆಳಗಾವಿ : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್‌ ಸದಸ್ಯ ಪ್ರದೀಪ್‌ ಈಶ್ವರ್‌ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸ್ಥಗಿತಗೊಂಡಿರುವ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸುವ ಯೋಜನೆಗೆ ಮರು ಚಾಲನೆಯನ್ನು ಮುಂದಿನ ಬಜೆಟ್‌ ನಲ್ಲಿ ಘೋಷಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

8 ನೇ ತರಗತಿ ಮಕ್ಕಳಿಗೆ ಸೈಕಲ್‌ ನೀಡುವ ಯೋಜನೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಬಂದ ಮೇಲೆ ಆರಂಭಿಸಲು ಸಾಧ್ಯವಾಗಿಲ್ಲ. ಮಕ್ಳ ಹಿತದೃಷ್ಟಿಯಿಂದ ಇದೊಂದು ಒಳ್ಳೆಯ ಯೋಜನೆ ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಯೋಜನೆ ಪುನಾರಂಭಿಸುವ ಬಗ್ಗೆ ಬಜೆಟ್‌ ನಲ್ಲಿ ಘೋಷಿಸುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular