ಬೆಳಗಾವಿ(ಸುವರ್ಣಸೌಧ): ನಿರುದ್ಯೋಗಿ ಪದವೀಧರರಿಗೆ ಹೊಸದಾಗಿ ಸಿಎಲ್ -2 ಮದ್ಯದಂಗಡಿ ಲೈಸೆನ್ಸ್ ನೀಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ 3981 ಸಿಎಲ್ -2, 2465 ಸಿಎಲ್ -7, 3631 ಸಿಎಲ್ -9 ಸನ್ನದು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆದಿರುವುದು ಗಮನಕ್ಕಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಮದ್ಯದ ದರ ಹೆಚ್ಚಳ ಮಾಡಿದ್ದರೂ ಮಾರಾಟ ಕಡಿಮೆಯಾಗಿಲ್ಲ. ಕುಡಿಯುವವರ ಸಂಖ್ಯೆ ಹೆಚ್ಚಿದೆ ಎಂದು ಚಟಾಕಿ ಹಾರಿಸಿದ್ದಾರೆ.