
ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿ.ಆರ್.ಎಸ್. ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರರಾವ್ ಅಸ್ವಸ್ಥರಾಗಿದ್ದು, ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಎರ್ರವೆಲ್ಲಿ ಫಾರ್ಮ್ ಹೌಸ್ ನಲ್ಲಿ ತೀವ್ರ ಅಸ್ವಸ್ಥರಾಗಿದ್ದ ಕೆಸಿಆರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಅವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟು, ಗಾಯವಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತೆಲಂಗಾಣದ ಮೊದಲ ಮುಖ್ಯಮಂತ್ರಿ ಆಗಿದ್ದ ಕೆಸಿಆರ್ 10 ವರ್ಷ ಆಡಳಿತ ನಡೆಸಿ ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಆರ್.ಎಸ್. ಪಕ್ಷಕ್ಕೆ ಹಿನ್ನಡೆಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.