HomeKarnatakaಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ....

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು :  5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕೆಇಎ ವತಿಯಿಂದ ನಡೆಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31 .‌ ನಿಮ್ಮ ಹತ್ತಿರದ KREIS ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24X7 ಸಹಾಯವಾಣಿ 9482300400 ಅಥವಾ X ಖಾತೆ @SWDGok.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024-25 ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ ಬಿಹಾರಿ ವಾಜಪೇಯಿ /ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular