ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.
ಕಮಿಷನ್ ದಂಧೆ ಹಿಂದೆ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ ಎಂದು ಶಾಸಕ ಯತ್ನಾಳ್ ಕಿಡಿಕಾರಿದರು.