
ಗಾಯಗೊಂಡವರನ್ನು ಸಣ್ಣಪುಟ್ಟ ಮತ್ತು ದೊಡ್ಡ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆರು ಮಂದಿ ಮೃತಪಟ್ಟಿದ್ದು, ಮತ್ತು ಸಣ್ಣ ಪುಟ್ಟ ಗಾಯಗಳೊಂದಿಗೆ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಟ್ಟುಹಬ್ಬದ ಮೇಣದಬತ್ತಿಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತೋರುತ್ತದೆ” ಎಂದು ಪಿಂಪ್ರಿ-ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.s
ಪಿಂಪ್ರಿ ಚಿಂಚ್ವಾಡ್ನ ತಲ್ವಾಡೆ ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವಾರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

