HomeIndiaಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶುಕ್ರವಾರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸದಾಗಿ ಚುನಾಯಿತರಾದ ತೆಲಂಗಾಣ ಮುಖ್ಯಮಂತ್ರಿ ಶುಕ್ರವಾರ ಸಂಜೆ ಲೋಕಸಭೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಅವರು ತೆಲಂಗಾಣದ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು 8ನೇ ಡಿಸೆಂಬರ್ 2023 ರಿಂದ ಜಾರಿಗೆ ಬರುವಂತೆ ಸಂಸತ್ತಿನ, ಲೋಕಸಭೆಯ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ಈ ಮೂಲಕ ಸಲ್ಲಿಸುತ್ತೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ರೆಡ್ಡಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular