HomeKarnatakaBIG NEWS : ಇಂದು ಮಧ್ಯಾಹ್ನ 3.30ಕ್ಕೆ ಹಿರಿಯ ನಟಿ ಲೀಲಾವತಿ ಅಂತ್ಯ ಸಂಸ್ಕಾರ :...

BIG NEWS : ಇಂದು ಮಧ್ಯಾಹ್ನ 3.30ಕ್ಕೆ ಹಿರಿಯ ನಟಿ ಲೀಲಾವತಿ ಅಂತ್ಯ ಸಂಸ್ಕಾರ : ಜಿಲ್ಲಾಧಿಕಾರಿ ಮಾಹಿತಿ

ಬೆಂಗಳೂರು : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದು, ಇಡೀ ಚಿತ್ರರಂಗ, ರಾಜ್ಯದ ಜನತೆ ಕಂಬನಿ ಮಿಡಿದಿದೆ.

ಇಂದು ಮಧ್ಯಾಹ್ನ 3.30ಕ್ಕೆ ಹಿರಿಯ ನಟಿ ಲೀಲಾವತಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.ಇಂದು ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ. ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಗೆ ಅವರು ಮೃತಪಟ್ಟಿದ್ದಾರೆ. ಲೀಲಾವತಿ(1938) ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 6೦೦ ಚಿತ್ರಗಳಲ್ಲಿ ನಟಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular