ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಹಾಗೂ ಗಣ್ಯರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಚಿತ್ರರಂಗದ ಹಲವಾರು ಕಲಾವಿದರು, ಗಣ್ಯರು, ರಾಜಕೀಯ ನಾಯಕರು ಭೇಟಿ ನೀಡಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಪುತ್ರ ವಿನೋದ್ ರಾಜ್ ಕುಮಾರ್ ಗೆ ಸಾಂತ್ವನ ಹೇಳುತ್ತಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಕೂಡ ಲೀಲಾವತಿ ಅವರ ಅಂತಿಮ ದರ್ಶನ ಪಡೆದು ಪುತ್ರ ವಿನೋದ್ ರಾಜ್ ಕುಮಾರ್ ಗೆ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ ಸ್ಮಾರಕ ನಿರ್ಮಾಣ ವಿಚಾರದಲ್ಲಿ ನಾನೊಬ್ಬನೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತೇವೆ ಎಂದರು. ಲೀಲಾವತಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತಹ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು.