HomeKarnatakaBREAKING : ಸೋಲದೇವನಹಳ್ಳಿ ನಿವಾಸ ತಲುಪಿದ ಲೀಲಾವತಿ ಪಾರ್ಥಿವ ಶರೀರ : ಅಂತಿಮ ವಿಧಿ ವಿಧಾನ...

BREAKING : ಸೋಲದೇವನಹಳ್ಳಿ ನಿವಾಸ ತಲುಪಿದ ಲೀಲಾವತಿ ಪಾರ್ಥಿವ ಶರೀರ : ಅಂತಿಮ ವಿಧಿ ವಿಧಾನ ಆರಂಭ

ಬೆಂಗಳೂರು : ರವೀಂದ್ರ ಕಲಾಕ್ಷೇತ್ರದಿಂದ ನೇರವಾಗಿ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದ್ದು, ಲೀಲಾವತಿ ಅವರ ಮನೆಯಲ್ಲೇ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಲಿದೆ.

ಬಾಳೆ ಕಂಬ, ಮಡಿಕೆ, ಬಿದಿರು, ಕನಕಂಬರ, ಸೇವಂತಿಗೆ, ಗುಲಾಬಿ ಹೂವಿನಿಂದ ಚಟ್ಟ ನಿರ್ಮಿಸಲಾಗಿದೆ. ಲೀಲಾವತಿ ಅವರ ಮನೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸೋಲೋದೇವನಹಳ್ಳಿಯ ಫಾರ್ಮ್ನ ಮುಂಭಾಗವೇ ಅಂತ್ಯಸಂಸ್ಕಾರ ನೆರವೇರಲಿದೆ.

ಸಂಜೆ 4 ಗಂಟೆಯಿಂದ ಲೀಲಾವತಿ ಅವರ ಅಂತಿಮ ವಿಧಿ ವಿಧಾನಗಳು ಆರಂಭವಾಗಲಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular