ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಸೋಲೋಹಳ್ಳಿಯ ತೋಟದ ಮನೆಯಲ್ಲಿ ಲೀಲಾವತಿ ಅಂತ್ಯಕ್ರಿಯೆಗೆ ಸಕಲ ಸಿದ್ದತೆ ಮಾಡಲಾಗಿದೆ.
ಲೀಲಾವತಿ ಮಗ ವಿನೋದ್ ರಾಜ್ ರಿಂದ ಅಂತಿಮ ವಿಧಿ ವಿಧಾನ ನೆರವೇರಿಸುತ್ತಿದ್ದಾರೆ. ಹಿಂದೂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನಡೆಸಲಾಗುತ್ತಿದೆ.ಸಕಲ ಸರ್ಕಾರಿ ಗೌರವಗಳೊಂದಿಗೆ ಲೀಲಾವತಿ ಅಂತ್ಯ ಸಂಸ್ಕಾರ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಹಿರಿಯ ನಟಿ ಲೀಲಾವತಿಯವರ ಪಾರ್ಥೀವ ಶರೀರಕ್ಕೆ ಪುಷ್ಟಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು. ನಂತರ ಸೋಲೋಹಳ್ಳಿಯ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗಿದೆ.