HomeKarnatakaBIG NEWS: ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

BIG NEWS: ಬಿಎಸ್ ವೈ ಹಾಗೂ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್

ಹಾಸನ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿವೇಶನ ನಡೆದಿರುವುದು ನೋಡಿದಿರಲ್ಲ, ಎಲ್ಲಿ ಜೋಡೆತ್ತು? ಎಂದು ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಒಂದು ದೆಹಲಿಗೆ ಹೋಗಿದೆ. ಒಂದು ಬೆಂಗಳೂರಿನಲ್ಲಿದೆ. ಜೋಡೆತ್ತುಗಳು ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದಿದ್ದರು. ಪಾಪ ಒಂದು ಎತ್ತನ್ನು ಬಿಟ್ಟು ಹೋಗಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ವಿ.ಸೋಮಣ್ಣ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಕಲ್ಪನೆ. ಹಾಗಾಗಿ ಯಾರೂ ಕೂಡ ಪಕ್ಷ ಬಿಡುವುದಿಲ್ಲ. ಹಿಂದೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದರಲ್ಲ ಆ ಲೀಡರ್ ಹಾಗೇ ಯಾರೂ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular