HomeKarnatakaBREAKING : ಚಿತ್ರದುರ್ಗದಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ : ಇಬ್ಬರು ಸಾವು, ಹಲವರ ಸ್ಥಿತಿ...

BREAKING : ಚಿತ್ರದುರ್ಗದಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ : ಇಬ್ಬರು ಸಾವು, ಹಲವರ ಸ್ಥಿತಿ ಗಂಭೀರ

ಚಿತ್ರದುರ್ಗ : ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹಲವರ ಸ್ಥಿತಿ ಗಂಭೀರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಸ್ ಹೊಸದುರ್ಗಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular