HomeKarnatakaBIG NEWS : ರಾಜ್ಯದಲ್ಲಿ ಮತ್ತೊಂದು ʻನೈತಿಕ ಪೊಲೀಸ್ ಗಿರಿʼಪ್ರಕರಣ ಬೆಳಕಿಗೆ : ದಾವಣಗೆರೆಯಲ್ಲಿ ಯುವಕನ...

BIG NEWS : ರಾಜ್ಯದಲ್ಲಿ ಮತ್ತೊಂದು ʻನೈತಿಕ ಪೊಲೀಸ್ ಗಿರಿʼಪ್ರಕರಣ ಬೆಳಕಿಗೆ : ದಾವಣಗೆರೆಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಅನ್ಯ ಕೋಮಿನ ಯುವತಿ ಜೊತೆಗೆ ಇದ್ದ ಯುವಕನನ್ನು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯಲ್ಲಿ ಅನ್ಯ ಕೋಮಿನ ಯುವತಿಯನ್ನು ಬೈಕ್‌ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಯುವಕನಿಗೆ ದುಷ್ಕರ್ಮಿಗಳು ತಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀನಿವಾಸ್‌ ಎಂಬಾತ ತಮ್ಮ ಮನೆಯ ಪಕ್ಕದಲ್ಲಿದ್ದ ಅನ್ಯ ಕೋಮಿನ ಯುವತಿಯನ್ನು ಬೈಕ್‌ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಬಳಿಕ ಗಾಯಾಳು ಶ್ರೀನಿವಾಸ್‌ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular