HomeKarnatakaBIG NEWS : ರಾಜ್ಯ ಸರ್ಕಾರಿ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಖಾಲಿ...

BIG NEWS : ರಾಜ್ಯ ಸರ್ಕಾರಿ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಖಾಲಿ ಹುದ್ದೆಗಳ ಭರ್ತಿಗೆ ಸಿದ್ಧತೆ!

ಬೆಳಗಾವಿ : ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದೆ.

ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಈ ಮೂಲಕ ಗ್ರೂಪ್‌ ಎ ಹಾಗೂ ಗ್ರೂಪ್‌ ಬಿ ಹುದ್ದೆಗಳನ್ನು ಇಲಾಖೆವಾರು ಅಗತ್ಯಕ್ಕೆ ಅನುಸಾರ ನೇಮಕ ಅಧಿಸೂಚನೆ ಹೊರಡಿಸಲು, ಪರೀಕ್ಷೆ ಕಾರ್ಯ ನಿರ್ವಹಣೆಗೆ ಸನ್ನದ್ಧವಾಗುವಂತೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಒಟ್ಟು 2,55,920 ಹುದ್ದೆಗಳು ಖಾಲಿಯಿದ್ದು, ಈ ಪೈಕಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 7,567 ಅಧಿಕಾರಿ, 54, 578  ಸಿಬ್ಬಂದಿ ಸೇರಿ 62,145, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 3,426 ಅಧಿಕಾರಿ, 31,770 ಸೇರಿ 35,196 ಹುದ್ದೆಗಳು ಖಾಲಿ ಇವೆ.

For Latest News Updates, Join Our Whatsapp Community🚩
RELATED ARTICLES

Most Popular