HomeKarnatakaBIG NEWS: ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ: ಶಾಮನೂರು ಶಿವಶಂಕರಪ್ಪ...

BIG NEWS: ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ: ಶಾಮನೂರು ಶಿವಶಂಕರಪ್ಪ ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಡಿಸೆಂಬರ್ 23, 24ರಂದು ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾ ಅಧಿವೇಶನ ನಡೆಯಲಿದೆ.

ಮಹಾಸಭಾ ಅಧ್ಯಕ್ಷ, ಶಾಸಕ ಶ್ಯಾಮನೂರು ಶಿವಶಂಕರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು. ಜಾತಿಗಣತಿ ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಮಾಡಲಿ, ನಮಗೆ ಬೇಸರವಿಲ್ಲ. ವೀರಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕನಿಷ್ಠ ಮೂರರಿಂದ ನಾಲ್ಕು ಲಕ್ಷ ಜನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವೀರಶೈವ ಪರಂಪರೆಯ ಎಲ್ಲಾ ಸ್ವಾಮೀಜಿಗಳು ಮಹಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಗ್ಗೆ ಜನರಿಗೆ ಮಾಹಿತಿ ನೀಡಲು ಪ್ರಚಾರ ವಾಹನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಆರೋಪ ಮುಕ್ತರಾಗಿ ಬರಲಿ. ಆಗ ಅವರನ್ನು ಅಧಿವೇಶನಕ್ಕೆ ಕರೆಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular