BIGG NEWS : ‘ವಿಕಸಿತ ಭಾರತ @2047′ : ಮಹತ್ವದ ‘ವಾಯ್ಸ್ ಆಫ್ ಯೂತ್’ ಅಭಿಯಾನಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿ ಅವರು ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ ಭಾರತ @2047: ಯುವಜನತೆಯ ಧ್ವನಿ’ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಯುವ ಪೀಳಿಗೆಯನ್ನು ಸಕ್ರಿಯವಾಗಿ ತೊಡಗಿಸಿಕೊಂಡು 2047 ರೊಳಗೆ ಭಾರತವನ್ನು ಅಭಿವೃದ್ದಿ ಹೊಂದಿದ ದೇಶವಾಗಿಸುವ ಗುರಿ ಹೊಂದಿದ್ದಾರೆ.

ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾಗುವ ಈ ಕಾರ್ಯಾಗಾರಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಅಧ್ಯಾಪಕ ವರ್ಗವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ. ವಿಕಸಿತ ಭಾರತ @ 2047 ಭಾರತವನ್ನು ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದೃಷ್ಟಿಕೋನವಾಗಿದೆ.

ಪ್ರಧಾನ ಮಂತ್ರಿ ಮೋದಿ ಅವರು 2023 ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ್ ಭಾರತ @2047: ಯುವಜನತೆಯ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾಗುವ ಈ ಕಾರ್ಯಾಗಾರಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಅಧ್ಯಾಪಕ ವರ್ಗವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ, ಇದು ಈ ಉಪಕ್ರಮದ ಆರಂಭವನ್ನು ಸೂಚಿಸುತ್ತದೆ.

ಏನಿದರ ಗುರಿ

ರಾಷ್ಟ್ರೀಯ ಯೋಜನೆಗಳು, ಆದ್ಯತೆಗಳು ಮತ್ತು ದೇಶದ ಗುರಿಗಳನ್ನು ರೂಪಿಸುವಲ್ಲಿ ದೇಶದ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಪ್ರಧಾನ ಮಂತ್ರಿ ಅವರ ದೂರ ದೃಷ್ಟಿಯಾಗಿದೆ. ಈ ದೃಷ್ಟಿಕೋನಕ್ಕೆ ಅನುಗುಣವಾಗಿ, ‘‘ವಿಕಸಿತ ಭಾರತ @2047: ಯುವಜನತೆಯ ಧ್ವನಿ’ ಉಪಕ್ರಮವು ದೇಶದ ಯುವಕರಿಗೆ ‘ವಿಕಸಿತ ಭಾರತ @2047 ರ ದೃಷ್ಟಿಕೋನಕ್ಕೆ ಆಲೋಚನೆ, ಸಲಹೆ ಸೂಚನೆಗಳನ್ನು ನೀಡಲು ವೇದಿಕೆ ಒದಗಿಸುತ್ತದೆ. ‘ವಿಕಸಿತ ಭಾರತ @2047ಗಾಗಿ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಯುವಕರನ್ನು ತೊಡಗಿಸಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸುವ ನಿಟ್ಟಿನಲ್ಲಿ ಕಾರ್ಯಾಗಾರಗಳು ಪ್ರಮುಖ ಹೆಜ್ಜೆಯಾಗಿರುತ್ತವೆ.

‘ವಿಕಸಿತ ಭಾರತ @ 2047 ಭಾರತವನ್ನು ಸ್ವಾತಂತ್ರ್ಯದ 100ನೇ ವರ್ಷವಾದ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ದೃಷ್ಟಿಕೋನವಾಗಿದೆ. ದೃಷ್ಟಿಕೋನವು ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಉತ್ತಮ ಆಡಳಿತ ಸೇರಿದಂತೆ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿರುತ್ತದೆ.

ದೇಶಕ್ಕೆ ಸ್ವಾತಂತ್ಯ ಲಭಿಸಿ 100 ವರ್ಷ ತುಂಬುವ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಮಾಡುವ ಗುರಿ
ಅದರ ಒಂದು ಭಾಗವಾಗಿ ಯುವಕರ ಧ್ವನಿ ಅಭಿಯಾನಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಮುಂದಿನ ತಿಂಗಳು ವಿಷನ್ ಡಾಕ್ಯುಮೆಂಟ್ ಬಿಡುಗಡೆಗೆ ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read