HomeKarnatakaಗಮನಿಸಿ : ಡಿ. 21 ರಿಂದ ʻಯುವನಿಧಿʼ ನೋಂದಣಿ ಆರಂಭ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ...

ಗಮನಿಸಿ : ಡಿ. 21 ರಿಂದ ʻಯುವನಿಧಿʼ ನೋಂದಣಿ ಆರಂಭ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಲಿಸ್ಟ್

ಬೆಂಗಳೂರು : ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಚಾಲನೆ ಸಿಗುತ್ತಿದ್ದು, ಡಿಸೆಂಬರ್ 21 ರಿಂದ ನೋಂದಣಿ ಆರಂಭವಾಗಲಿದೆ.

ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯಡಿ ಡಿಪ್ಲೋಮಾ ಪದವಿ ಹೊಂದಿದವರಿಗೆ ಪ್ರತಿ ತಿಂಗಳು 1500 ರೂ, ಪದವೀಧರರಿಗೆ 3 ಸಾವಿರ ರೂ. ಭತ್ಯೆ ನೀಡಲಾಗುತ್ತದೆ.

ಏನೆಲ್ಲಾ ದಾಖಲೆಗಳು ಬೇಕು..?
1) ಆಧಾರ್ ಕಾರ್ಡ್,
2) 10ನೇ ತರಗತಿ ಅಂಕಪಟ್ಟಿ,
3) ದ್ವಿತೀಯ ಪಿಯುಸಿ ಅಂಕಪಟ್ಟಿ,
4) ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ,
5) ಡಿಪ್ಲೊಮಾ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ (ಅನ್ವಯವಾದಲ್ಲಿ)
6) ಆದಾಯ ಪ್ರಮಾಣಪತ್ರ, ಸೆಲ್ಫ್ ಡಿಕ್ಲೆರೇಷನ್ ಪ್ರತಿ
7) ಮೊಬೈಲ್ ನಂಬರ್, ಬ್ಯಾಂಕ್ ಖಾತೆ ವಿವರಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022-2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಇದಕ್ಕಿಂತ ಹಿಂದೆ ಪದವಿ ಅಥವಾ ಡಿಪ್ಲೋಮಾ ಮುಗಿಸಿದವರಿಗೆ ಭತ್ಯೆ ಸಿಗಲ್ಲ ಎಂದು ವರದಿಯಾಗಿದೆ.

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ ಐದು ಗ್ಯಾರೆಂಟಿಗಳ ಪೈಕಿ ಒಂದಾಗಿರುವ ಯುವನಿಧಿ ಯೋಜನೆ ಪ್ರಕಾರ ನಿರುದ್ಯೋಗಿಗಳಿ ಮಾಸಿಕ ಭತ್ಯೆ ನೀಡುವ ಭರವಸೆ ವ್ಯಕ್ತಪಡಿಸಲಾಗಿತ್ತು. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲೂ ಇದನ್ನು ಘೋಷಿಸಿತ್ತು.

‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು, ಈ ಯೋಜನೆಯು ಪ್ರತಿ ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತವಾಗಲಿದೆ. ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಎಲ್ಲಾ ದಾಖಲೆಗಳನ್ನು ನೀವು ರೆಡಿ ಮಾಡಿಟ್ಟುಕೊಳ್ಳಿ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular