ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಜ.23ಕ್ಕೆ ಮರು ಪರೀಕ್ಷೆ ನಡೆಯಲಿದೆಈ ಮೊದಲು ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಿಕೆ ಮಾಡಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ 545 ಪೊಲೀಸ್ ಸಬ್ಇನ್ಸೆಪೆಕ್ಟರ್ ಹುದ್ದೆಯ ಮರುನೇಮಕಾತಿ ಪರೀಕ್ಷೆಯಲ್ಲಿ ಎರಡು ಪತ್ರಿಕೆಗಳಿದ್ದು, ಪ್ರಶ್ನೆ ಪತ್ರಿಕೆ ಹಾಗೂ ಪಠ್ಯಕ್ರಮ ಈ ಹಿಂದೆ ಜರುಗಿದ ಪರೀಕ್ಷೆಯ ಮಾದರಿಯದಾಗಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಈ ಸಂಬಂಧ ಈಗಾಗಲೇ ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಸ್ಪಷ್ಟೀಕರಣ ನೀಡಿದ್ದು, ಸಬ್ಇನ್ಸ್ಪೆಕ್ಟರ್ 545 ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆಯ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ಅಭ್ಯರ್ಥಿಗಳಿಗೆ ಯಾವುದೇ ಗೊಂದಲ ಇಲ್ಲ. ಈ ಹಿಂದೆ ಪೊಲೀಸ್ ನೇಮಕಾತಿ ಪರೀಕ್ಷೆ ನಡೆಸಿದ್ದ ಕ್ರಮದಲ್ಲಿಯೇ ಈ ಬಾರಿಯೂ ಪರೀಕ್ಷೆ ನಡೆಯಲಿದೆ, ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಓದಲು ಸಾಕಷ್ಟು ಸಮಯ ಬೇಕು, ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ. ಆದರೆ ಕೆಇಎ ಇದನ್ನು ನಿರಾಕರಿಸಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. 23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು ಪರೀಕ್ಷೆಗೂ ಅರ್ಹರು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಇತ್ತೀಚೆಗೆ ತಿಳಿಸಿದ್ದರು.