HomeIndiaBREAKING : ಸಂಸದ ಸ್ಥಾನದಿಂದ ಉಚ್ಛಾಟನೆ ಪ್ರಶ್ನಿಸಿ 'ಸುಪ್ರೀಂ ಕೋರ್ಟ್' ಮೆಟ್ಟಿಲೇರಿದ 'ಮಹುವಾ ಮೊಯಿತ್ರಾ'

BREAKING : ಸಂಸದ ಸ್ಥಾನದಿಂದ ಉಚ್ಛಾಟನೆ ಪ್ರಶ್ನಿಸಿ ‘ಸುಪ್ರೀಂ ಕೋರ್ಟ್’ ಮೆಟ್ಟಿಲೇರಿದ ‘ಮಹುವಾ ಮೊಯಿತ್ರಾ’

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟನೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಂಸತ್ ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಪ್ರಶ್ನೆ ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನೈತಿಕ ಸಮಿತಿ ಲೋಕಸಭೆಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭಾ ಸದಸ್ಯತ್ವದಿಂದ ಉಚ್ಛಾಟಿಸಲು ನಿರ್ಣಯ ಕೈಗೊಳ್ಳಲಾಯಿತು. ಟಿಎಂಸಿ ಸಂಸದೆ ಮಹುವಾ ಅವರನ್ನು ಉಚ್ಛಾಟಿಸುವ ನಿರ್ಣಯ ಕೈಗೊಳ್ಳುತ್ತಿದ್ದಂತೆ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್(ಟಿಎಂಸಿ) ನಾಯಕಿ ಮತ್ತು ಮಾಜಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯ ಪಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular