HomeKarnatakaBIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು; ತೀವ್ರ...

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು; ತೀವ್ರ ಖಂಡನೆ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಗಾಯಾಳು ಮಹಿಳೆಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಗೆ ಧೈರ್ಯ ತುಂಬಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಡೀ ಮಾನವ ಕುಲ ತಲೆತಗ್ಗಿಸುವ ಘಟನೆ ಇದು. ನನ್ನ ತಾಲೂಕಿನಲ್ಲಿ ಇಂತಹ ಘಟನೆ ನಡೆದಿರುವು ನಿಜಕ್ಕೂ ಖೇದಕರ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಈಗಾಗಲೇ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular