alex Certify BREAKING NEWS: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಅಮಿತ್ ಶಾ ಮಹತ್ವದ ಘೋಷಣೆ; ಜಮ್ಮು –ಕಾಶ್ಮೀರದಲ್ಲಿ ಚುನಾವಣೆ ಬಗ್ಗೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ; ಅಮಿತ್ ಶಾ ಮಹತ್ವದ ಘೋಷಣೆ; ಜಮ್ಮು –ಕಾಶ್ಮೀರದಲ್ಲಿ ಚುನಾವಣೆ ಬಗ್ಗೆ ಮಾಹಿತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370ರ ಅಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಕುರಿತಾಗಿ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಿದ್ದಾರೆ. ಇಂದಿನ ದಿನ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಇಂದಿನ ದಿನ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ. ಕಾಂಗ್ರೆಸ್ ನವರಿಗೆ ಈಗಲೂ ಆದೇಶದ ಬಗ್ಗೆ ಆಕ್ಷೇಪಣೆ ಇದೆ. ಒಳ್ಳೆಯ ಆದೇಶಗಳನ್ನು ಕಾಂಗ್ರೆಸ್ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಪಿಒಕೆಯನ್ನು ಯಾರಿಂದಲೂ ವಶಪಡಿಸಿಕೊಳ್ಳಲು ಆಗುವುದಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ 42000 ನಾಗರಿಕರು ಮೃತಪಟ್ಟಿದ್ದಾರೆ. ವಿಶೇಷ ಸ್ಥಾನಮಾನದಿಂದ ಪ್ರತ್ಯೇಕತಾವಾದ ಮತ್ತಷ್ಟು ಹೆಚ್ಚಳವಾಗುತ್ತಿತ್ತು. ಸಾಂವಿಧಾನಿಕವಾಗಿ ಆರ್ಟಿಕಲ್ 370 ರದ್ದುಗೊಳಿಸಲಾಗಿದೆ. ಆರ್ಟಿಕಲ್ 370ರ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಸಿಗಲಿದೆ. ಜಮ್ಮು ಕಾಶ್ಮೀರದಲ್ಲಿ ಈಗ ಚುನಾವಣೆ ನಡೆಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...