HomeIndiaವಿದ್ಯಾರ್ಥಿಗಳಿಗೆ NMC ಗುಡ್ ನ್ಯೂಸ್: 2020 -21 ರಲ್ಲಿ ದಾಖಲಾದ ವೈದ್ಯ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ

ವಿದ್ಯಾರ್ಥಿಗಳಿಗೆ NMC ಗುಡ್ ನ್ಯೂಸ್: 2020 -21 ರಲ್ಲಿ ದಾಖಲಾದ ವೈದ್ಯ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ

ನವದೆಹಲಿ: ಕೊರೋನಾ ಸಾಂಕ್ರಾಮಿಕ ಇದ್ದ ಕಾರಣ 2020 -21ನೇ ಸಾಲಿನಲ್ಲಿ ಎಂಬಿಬಿಎಸ್ ಪದವಿ ಕೋರ್ಸ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರದಿದ್ದಲ್ಲಿ ಅವರಿಗೆ ಹೆಚ್ಚುವರಿ ಒಂದು ಅವಕಾಶ ನೀಡಲು ನಿರ್ಧರಿಸಲಾಗಿದೆ.

ಈ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಒಂದು ಹೆಚ್ಚುವರಿ(5ನೇ ಅವಕಾಶ) ನೀಡಲು ರಾಷ್ಟ್ರೀಯ ವೈದ್ಯಕೀಯ ಆಯೋಗ(NMC) ತೀರ್ಮಾನಿಸಿದೆ. 2020 -21ರ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ಕಾಡಿದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಒಂದು ಬಾರಿಗೆ ಮಾತ್ರ ತೆಗೆದುಕೊಂಡಿರುವ ನಿರ್ಧಾರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಜಾರಿ ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆ ಶೈಕ್ಷಣಿಕ ವರ್ಷದ ಅನುತ್ತೀರ್ಣ ಅಭ್ಯರ್ಥಿಗಳಿಗೆ ಅನ್ವಯಿಸಿ ಐದನೇ ಯತ್ನ ನೀಡಲಾಗುವುದು. ಆ ವರ್ಷದ ಶೈಕ್ಷಣಿಕ ವರ್ಷದ ಕಲಿಕೆಯು ಕೋವಿಡ್ ಕಾರಣದಿಂದ ಬಾಧಿತವಾಗಿದ್ದ ಹಿನ್ನೆಲೆಯಲ್ಲಿ ಒಂದು ಬಾರಿ ಮಾತ್ರ ಹೆಚ್ಚುವರಿ ಅವಕಾಶ ನೀಡಿದ್ದು, ಮುಂದೆ ನೀಡುವುದಿಲ್ಲ ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular