HomeKarnatakaBIG NEWS : ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ :...

BIG NEWS : ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ : ಶಾಸಕ ಯತ್ನಾಳ್ ಹೊಸ ಬಾಂಬ್‌

ಬೆಳಗಾವಿ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಗೆ ಬ್ಲ್ಯಾಕ್‌ ಮೇಲ್‌ ಮಾಡಿ ತಮ್ಮ ಮಗ ಬಿ.ವೈ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಪಂಚಮಸಾಲಿ ಸಮುದಾಯದ ಸ್ವಾಮೀಜಿ ಬಳಿ ಮಾತನಾಡಿದ ಯತ್ನಾಳ್‌, ಬಿ.ಎಸ್.‌ ಯಡಿಯೂರಪ್ಪ ಅವರು ಹೈಕಮಾಂಡ್‌ ಗೆ ಬ್ಲ್ಯಾಕ್‌ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡಲ್ಲ ಎಂದು ಬೆದರಿಕೆ ಹಾಕಿ ತಮ್ಮ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನೂ ಸೋಲಿಸಲು ಅಪ್ಪ-ಮಕ್ಕಳು ತಂತ್ರಗಾರಿಕೆ ಮಾಡಿ ಹಣ ಕಳಿಸಿದ್ದರು. ಬೊಮ್ಮಾಯಿ ಅವರಷ್ಟೇ ಅಲ್ಲ ಅನೇಕರ ಸೋಲಿಗೆ ವಿಜಯೇಂದ್ರ ಕಳೆದ ಚುನಾವಣೆಯಲ್ಲಿ ಹುನ್ನಾರ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಯತ್ನಾಳ್ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular