ಚಿಕ್ಕಮಗಳೂರು : ಪಾಪಿ ಪತಿಯೋರ್ವ ವಿಷದ ಇಂಜೆಕ್ಷನ್ ಚುಚ್ಚಿಸಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರಿಂದ ಗ್ರಾಮದಲ್ಲಿ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. . ಮೃತ ಮಹಿಳೆಯನ್ನು ಶ್ವೇತ (31) ಎಂದು ಗುರುತಿಸಲಾಗಿದ್ದು, ಪತಿ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿಗೆ ಪತಿ ದರ್ಶನ್ ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪತಿ ದರ್ಶನ್ ವಿರುದ್ಧ ಮೃತ ಶ್ವೇತಾ ಪೋಷಕರು ಈ ಆರೋಪ ಮಾಡಿದ್ದಾರೆ. ದರ್ಶನ್ ವಿರುದ್ಧ ಅನೈತಿಕ ಸಂಬಂಧ ಆರೋಪ ಕೂಡ ಕೇಳಿಬಂದಿದ್ದು, ಇದಕ್ಕೆ ಪತ್ನಿ ಅಡ್ಡಿಯಾಗಿದ್ದಕ್ಕೆ ದರ್ಶನ್ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯರ ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಸದ್ಯ, ದರ್ಶನ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.