HomeIndiaಘಟಾನುಘಟಿಗಳ ಭಾರಿ ಪೈಪೋಟಿ ನಡುವೆಯೂ ಮೊದಲ ಬಾರಿ ಗೆದ್ದ ಶಾಸಕನಿಗೆ ಸಿಎಂ ಸ್ಥಾನ: ಡಿ. 15ರಂದು...

ಘಟಾನುಘಟಿಗಳ ಭಾರಿ ಪೈಪೋಟಿ ನಡುವೆಯೂ ಮೊದಲ ಬಾರಿ ಗೆದ್ದ ಶಾಸಕನಿಗೆ ಸಿಎಂ ಸ್ಥಾನ: ಡಿ. 15ರಂದು ಪ್ರಮಾಣವಚನ

ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿದೆ.

ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದ ಘಟಾನುಘಟಿ ನಾಯಕರಿಗೆ ಶಾಕ್ ನೀಡಿದೆ. ಸಂಗನೇರ್ ವಿಧಾನಸಭೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿಯಾ ಕುಮಾರಿ, ಪ್ರೇಮ್ ಚಂದ್ ಭೈರ್ವಾ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ವಾಸುದೇವ್ ದೇವನಾನಿ ಅವರನ್ನು ವಿಧಾನಸಭೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಇತ್ತು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ಮೇಘವಾಲ್, ಅಶ್ವಿನಿ ವೈಷ್ಣವ್, ದಿಯಾ ಕುಮಾರಿ, ಬಾಲಕನಾಥ, ಬಿಜೆಪಿ ರಾಜ್ಯಾಧ್ಯಕ್ಷ ಸಿ.ಪಿ. ಜೋಶಿ, ಬಿಜೆಪಿ ಹಿರಿಯ ನಾಯಕ ಓಂ ಮಾಥೂರ್ ಅವರು ಸ್ಪರ್ಧೆಯಲ್ಲಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular