HomeKarnatakaBIG NEWS : ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ʻಡ್ರಗ್ಸ್ ಬೇಟೆʼ : 21 ಕೋಟಿ ರೂ....

BIG NEWS : ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ʻಡ್ರಗ್ಸ್ ಬೇಟೆʼ : 21 ಕೋಟಿ ರೂ. ಮೌಲ್ಯದ ಮಾಲು ವಶಕ್ಕೆ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಸಿಬಿ ಪೊಲೀಸರು ಅತಿದೊಡ್ಡ ಡ್ರಗ್ಸ್‌ ದಾಳಿ ನಡೆಸಿದ್ದು, ಬರಬ್ಬೋರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಅನ್ನು ಜಪ್ತಿ ಮಾಡಲಾಗಿದೆ.

ಹೊಸ ವರ್ಷದ ಪಾರ್ಟಿಗಳಿಗೆ ಪೂರೈಸಲು ವಿದೇಶಿ ಡ್ರಗ್‌ ಪೆಡ್ಲರ್‌ ಒಬ್ಬ ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ ಡ್ರಗ್ಸ್‌ ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲೇ ದೊಡ್ಡ ಡ್ರಗ್ಸ್‌ ಕಾರ್ಯಾಚರಣೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಮೂರ್ತಿ ನಗರದ ಲಿಯೋನಾರ್ಡ್‌ ಓಕ್ವುಡಿಲಿ ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ 16 ಕೆಜಿ ತೂಕದ ಎಂಡಿಎಂಎ ಕ್ರಿಸ್ಟಲ್‌, 500 ಗ್ರಾಂ ಕೋಕೆನದ, ಮೂರು ಮೊಬೈಲ್ ಹಾಗೂ ಮೂರು ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳು ಸೇರಿದಂತೆ ಒಟ್ಟು 21 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ಡ್ರಗ್ಸ್‌ ದಂಧೆಯಲ್ಲಿ ಲಿಯೋ ತೊಡಗಿದ್ದು, ಈತನ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular