ಬೆಳಗಾವಿ : ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ವಸತಿ ಗೃಹಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಒತ್ತು ನೀಡಿದ್ದು, 2025ರ ವೇಳೆಗೆ ರಾಜ್ಯದ ಶೇ 80ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪೊಲೀಸ್ ಗೃಹ2020 ಎಂಬಯೋಜನೆಯನ್ನು ರೂಪಿಸಿ ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಪೊಲೀಸ್ ಗೃಹ 2025 ಯೋಜನೆ ಹಾಕಿಕೊಳ್ಳಲಾಗಿದ್ದು, ಕನಿಷ್ಠ ಶೇ.80ರಷ್ಟು ಪೊಲೀಸ್ ಸಿಬ್ಬಂದಿಗೆ ಮನೆಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಆದ್ಯತೆನೀಡಿದೆ. ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು. ಅವಶ್ಯಕತೆ ಇರುವ ಕಡೆ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಈಗಾಗಲೇ ಶೇ.40 ರಷ್ಟು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ ಎ೦ದು ಮಾಹಿತಿ ನೀಡಿದರು.